Breaking News
Oplus_131072

ಟಾಟಾ ಏಸ್ ವಾಹನ ಪಲ್ಟಿ ಪರಿಣಾಮ ಸುಮಾರು 15ಕ್ಕೂ ಅಧಿಕ ಮಂದಿಗೆ ಗಾಯ

ಅಣ್ಣರೂಕೇರಿ ಗ್ರಾಮದಿಂದ ಚಿಕ್ಕದೇವಮ್ಮನ ಬೆಟ್ಟಕ್ಕೆ ಸುಮಾರು ಇಪ್ಪತ್ತು ಮಂದಿಯನ್ನು ತುಂಬಿಕೊಂಡು ತೆರಳುತಿದ್ದ ವೇಳೆ ಟಾಟಾ ಏಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗಕ್ಕೆ ಪಲ್ಟಿಯಾಗಿದೆ.ಅಪಘಾತದ ಮಾಹಿತಿ ಅರಿತ ಕೂಡಲೇ ಸ್ಥಳಕ್ಕೆ ಬಂದು ಸ್ಥಳೀಯರು ಪೊಲೀಸರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಇನ್ನೂ ತಲೆ ಹಾಗೂ ಕೈ ಕಾಲಿಗೆ ತೀವ್ರ ಗಾಯವಾದ ನಾಲ್ಕು ಮಂದಿಯನ್ನು ಮೈಸೂರಿಗೆ ರವಾನೆ ಮಾಡಲಾಗಿದ್ದು, ಹತ್ತಕ್ಕೂ ಅಧಿಕ ಮಂದಿಯನ್ನು ಚಾಮರಾಜನಗರ ಜಿಲ್ಲಾಸತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ.
ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಚಾಲಕ ಹಾಗೂ ವಾಹನವನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *