Breaking News

ಬೆಂಗಳೂರು:ಜೆಸಿಬಿ ಡಿಕ್ಕಿಯಾಗಿ ವಿದ್ಯುತ್ ಕಂಬ ಮುರಿದುಬಿದ್ದು ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವು.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮತಿ ಮತ್ತು ಸೋನಿ ಎಂಬುವವರು ಮೃತಪಟ್ಟಿದ್ದಾರೆ.
ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಜೆಸಿಬಿ ಡಿಕ್ಕಿಯಾಗಿ ವಿದ್ಯುತ್ ಕಂಬ ಮುರಿದುಬಿದ್ದಿದ್ದು, ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಸದ್ದುಗುಂಟೆ ಪಾಳ್ಯದಲ್ಲಿ ನಡೆದಿದೆ.ಇಬ್ಬರು ತಮ್ಮ ಮಕ್ಕಳನ್ನು ಟ್ಯೂಷನ್ ನಿಂದ ಮನೆಗೆ ಕರೆದುಕೊಂಡು ಬರುವಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ಮಕ್ಕಳಿಗೂ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *