Breaking News
Oplus_131072

ಆಟವಾಡುವಾಗ ಸಂಪ್ ನಲ್ಲಿ ಬಿದ್ದು ಇಬ್ಬರು ಮಕ್ಕಳ ಸಾವು!

ಕಲ್ಬುರ್ಗಿಯಲ್ಲಿ ಘೋರವಾದಂತಹ ದುರಂತ ಸಂಭವಿಸಿದ್ದು, ಆಟವಾಡುತ್ತಿದ್ದಾಗ ಸಂಪ್‌ಗೆ ಬಿದ್ದು ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಕೋಳಕೂರ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.ಆಟವಾಡುತ್ತಿದ್ದಾಗ ಇಬ್ಬರು ಮಕ್ಕಳು ಕಣ್ಮರೆ ಆಗಿದ್ದರು. ಪೋಷಕರು ಎಷ್ಟೇ ಹುಡುಕಾಡಿದರು ಮಕ್ಕಳು ಸಿಕ್ಕಿರಲಿಲ್ಲ.

ಮಕ್ಕಳು ಕಾಣದೆ ಇದ್ದಾಗ ಗಾಬರಿಯಾದ ಪೋಷಕರು ಗ್ರಾಮದ ಸಿದ್ದಬಸವೇಶ್ವರ ದೇವಸ್ಥಾನದ ಮೈಕ್ ಮೂಲಕ ಮಕ್ಕಳು ಕಾಣೆಯಾಗಿರುವ ಬಗ್ಗೆ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದರು. ಕೊನೆಗೆ ಪೊಲೀಸರು ಸಂಪ್ ತೆರೆದು ನೋಡಿದಾಗ ಮಕ್ಕಳು ಬಿದ್ದಿರುವುದು ಗೊತ್ತಾಗಿದೆ. ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *