Breaking News
Oplus_131072

ಗ್ರಾಮ ಪಂಚಾಯಿತಿ ಸದಸ್ಯನ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಅದೃಷ್ಟವಶಾತ್ ಹಾನಿ ಸಂಭವಿಸಿಲ್ಲ.

ಗ್ರಾಮ ಪಂಚಾಯಿತಿ ಸದಸ್ಯನ ಮನೆಗೆ ಮಧ್ಯರಾತ್ರಿಯಲ್ಲಿ‌ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು ನಾಲ್ಕು ಮಂದಿ ಪ್ರಾಣ ಅಪಾಯದಿಂದ ಪಾರಾಗಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.ಮನೆಯಲ್ಲಿ ಗಾಢ ನಿದ್ದೆಗೆ ಜಾರಿದ್ದ ಸಮಯದಲ್ಲಿ ಜಗನ್ನಾಥ ಹಾಗೂ ಪತ್ನಿ ಅವರ ಇಬ್ಬರು ಮಕ್ಕಳು ಅಗ್ನಿ ದುರಂತದಿಂದ ಪಾರಾಗಿದ್ದಾರೆ. ಸೋಮವಾರ ಮಧ್ಯರಾತ್ರಿ 1.30 ರ ಸಮಯದಲ್ಲಿ ಕಿಡಿಗೇಡಿಗಳು ಸುಮಾರು 60 ಲೀಟರ್ ಪೆಟ್ರೋಲ್ ತಂದು ಇದರಲ್ಲಿ 50 ಲೀಟರ್ ಪೆಟ್ರೋಲ್ ಮನೆಯ ಕಿಟಕಿಯ ಮೂಲಕ ಸುರಿದು ಬೆಂಕಿ ಹಚ್ಚಿ 10 ಲೀಟರ್ ನ ಒಂದು ಕ್ಯಾನ್ ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.ಸ್ಥಳಕ್ಕೆ ಆಗಮಿಸಿದ ಅವಲಹಳ್ಳಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *