Breaking News
Oplus_131072

2 ತಿಂಗಳ ಹಿಂದೆ ಹೂತಿಟ್ಟ ಶವ ಹೊರತೆಗೆದ ಪೊಲೀಸರು.ಮೃತದೇಹ ಯಾರದ್ದು?

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಮೂಲದ, ಸಾಫ್ಟವೇರ್‌ ಎಂಜಿನಿಯರ್‌ ಆಗಿದ್ದ ನವೀನ ವೀರಭದ್ರಪ್ಪ ಹೆಗಡೆ ಅವರ ಶವವನ್ನೇ ಹೊರತೆಗೆದು ಪರಿಶೀಲನೆ ನಡೆಸಲಾಯಿತು. ಮೃತ ನವೀನನ ತಂದೆ- ತಾಯಿ ತನ್ನ ಪುತ್ರ ಸಾವಿನ ಕುರಿತಾಗಿ ಸಂಶಯ ವ್ಯಕ್ತಪಡಿಸಿದ್ದರಿಂದ ಬೆಂಗಳೂರಿನಲ್ಲಿರುವ ತಿಲಕ್‌ನಗರ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದರು. ಗುಳೇದಗುಡ್ಡದಲ್ಲಿ ಕಳೆದ 2022 ರಿಂದ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟವೇರ್‌ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಅನಾರೋಗ್ಯ ಹಿನ್ನೆಲೆ ನವೀನ ಕೆಲ ತಿಂಗಳಿಂದ ಆಗಾಗ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ. ಜನವರಿ 5ರಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದ.ಪಂಚನಾಮೆ, ಶವಪರೀಕ್ಷೆ ಬಳಿಕ ಮತ್ತೆ ಶವ ಹೂಳಲಾಯಿತು.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *