Breaking News

ನಾಪತ್ತೆಯಾಗಿದ್ದ ವಸತಿ ಶಾಲೆಯ ಇಬ್ಬರೂ ವಿದ್ಯಾರ್ಥಿಗಳು ಪತ್ತೆ.

ವಿದ್ಯಾರ್ಥಿಗಳು ಮಾರ್ಚ್​ 3ರಂದು ವಸತಿ ಶಾಲೆಯಿಂದ‌ ನಾಪತ್ತೆಯಾಗಿದ್ದರು. ಮಂಗಳೂರಿನ ಹೋಟೆಲ್​ವೊಂದರಲ್ಲಿ ಕೆಲಸಕ್ಕೆ ಸೇರಲು ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಯಶ್ವಿತ್, ತರುಣ್ ಉತ್ತಮ ಸ್ನೇಹಿತರಾಗಿದ್ದಾರೆ. ಓದಿನಲ್ಲಿ ಆಸಕ್ತಿ ಇಲ್ಲದೆ ಇದ್ದರೂ ವಸತಿ ಶಾಲೆಯಲ್ಲಿ ಒಳ್ಳೆಯ ಹೆಸರು ಪಡೆದಿದ್ದರ.ಮಕ್ಕಳು ನಾಪತ್ತೆಯಾಗುತ್ತಿದ್ದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರು ದಾಖಲಿಸಿಕೊಂಡ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು, ವಿದ್ಯಾರ್ಥಿಗಳ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಿದ್ದಾರೆ.ಅನುಮಾನಗೊಂಡು ಮಂಗಳೂರಿನಲ್ಲೂ ಹುಡುಕಾಟ ನಡೆಸಿದಾಗ ವಿದ್ಯಾರ್ಥಿಗಳು ಪತ್ತೆಯಾಗಿದ್ದಾರೆ. ಪೊಲೀಸರು ಇಬ್ಬರೂ ವಿದ್ಯಾರ್ಥಿಗಳನ್ನು ಠಾಣೆಗೆ ಕರೆತಂದಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *