ಐದು ದಿನಗಳ ಬಳಿಕ ದೆಹಲಿಯ ಚಾವ್ಲಾ ಕಾಲುವೆಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಯುವತಿಯನ್ನು ಹಿಸುಕಿ ಕೊಂದು ಆಕೆಯ ದೇಹಕ್ಕೆ ದೊಡ್ಡ ಕಲ್ಲು ಕಟ್ಟಿ ಆಕೆಯ ಸ್ನೇಹಿತನೇ ಎಸೆದಿರುವ ವಿಚಾರ ಬೆಳಕಿಗೆ ಬಂದಿದೆ. ಈಶಾನ್ಯ ದೆಹಲಿಯ ಸೀಮಾಪುರಿಯ ಸುಂದರ್ ನಗರಿ ನಿವಾಸಿ ಕೋಮಲ್ ಅವರನ್ನು ಸ್ನೇಹಿತ ಆಸಿಫ್ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆಸಿಫ್ ನನ್ನು ಬಂಧಿಸಲಾಗಿದ್ದು, ಅಪರಾಧಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೊಲೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂದು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

