ದಕ್ಷಿಣ ಜೈಪುರದಲ್ಲಿ ಈ ಘಟನೆ ನಡೆದಿದ್ದು, ಕೊಲೆ ಮಾಡಿ ಆರೋಪಿಗಳು ಹಾಡಹಗಲೇ ಶವವನ್ನು ಮೂಟೆಕಟ್ಟಿ ಬೈಕ್ ನಲ್ಲಿ ಸಾಗಿಸಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಮದುವೆಯಾಗಿದ್ದರೂ ತನ್ನ ಪ್ರಿಯಕರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ತನ್ನ ಪ್ರಿಯಕರನ ನೆರವಿನಿಂದ ಗಂಡನನ್ನು ಕೊಲೆ ಮಾಡಿದ್ದಾಳೆ. ಇಬ್ಬರೂ ದೇಹವಿದ್ದ ಚೀಲದೊಂದಿಗೆ ಬೈಕ್ ನಲ್ಲಿ ಹೋಗುತ್ತಿರುವುದು ಸ್ಥಳದಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಳಿಕ ಪೊಲೀಸರು ಆರೋಪಿ ಮಹಿಳೆ ಸೇರಿದಂತೆ ವಶಕ್ಕೆ ಪಡೆದು ತೀವ್ರ ತನಿಖೆ ನಡೆಸಿದಾಗ ಆಕೆ ಸತ್ಯಾಂಶ ಬಾಯಿಬಿಟ್ಟಿದ್ದಾರೆ. ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಗಳಿಬ್ಬರನ್ನೂ ಬಂಧಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

