ಕಡೂರು ಡಿಪೋದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ನಿಂದ ಈ ದುರಂತ ಸಂಭವಿಸಿದೆ. ತುಮಕೂರು ಟೌನ್ ಹಾಲ್ ಬಳಿ ನಡೆದ ಭೀಕರ ಘಟನೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.ಹಿಂಬದಿಯ ಚಕ್ರ ಮಂಜಮ್ಮನ ಮೇಲೆ ಹರಿದು ಹೋದ ನಂತರವೇ ಸತೀಶ್ ಅಂತಿಮವಾಗಿ ಬಸ್ ನಿಲ್ಲಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಪರಿಸ್ಥಿತಿ ಕೈಮೀರಿ ಹೋಗಿತ್ತು. ಅಪಘಾತದ ನಂತರ ತಕ್ಷಣವೇ ನಿಲ್ಲಿಸಲು ಅಥವಾ ನಿಧಾನಗೊಳಿಸಲು ಯಾವುದೇ ಪ್ರಯತ್ನವನ್ನು ಮಾಡದ ಚಾಲಕನ ನಿರ್ಲಕ್ಷ್ಯ ಈ ದೃಶ್ಯಾವಳಿಗಳು ಸ್ಪಷ್ಟವಾಗಿ ಎತ್ತಿ ತೋರಿಸುತ್ತಿವೆ. ಕರ್ನಾಟಕ ಪೋರ್ಟ್‌ಫೋಲಿಯೋ ಎಂಬ ಟ್ವಿಟರ್ ಖಾತೆಯಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

