ಬಾಗಲಕೋಟೆಯ ಜಮಖಂಡಿ ನಗರದಲ್ಲಿರುವ ಹೊಸ ಬಬಲಾದಿ ಮಠಕ್ಕೆ ಆಗಮಿಸಿದ ಸಿಐಡಿ ಅಧಿಕಾರಿಗಳ ತಂಡ ಸದಾಶಿವ ಮುತ್ಯಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮುತ್ಯಾ ಅವರು ಇತ್ತೀಚೆಗೆ ಕೆಲವು ವರ್ಷಗಳಿಂದ ಕಾಲಜ್ಞಾನ ಹೇಳುತ್ತಾ ಬಂದಿದ್ದು, ಭಕ್ತರು ಕೂಡ ಅವರು ಹೇಳುವ ಕಾಲಜ್ಞಾನ ನಿಜವಾಗುತ್ತೆ ಎಂದು ನಂಬಿದ್ದಾರೆ. ಬೆಳಗಾವಿಯ ಗೋಕಾಕ್ ನ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ನಲ್ಲಿದ್ದ ಗ್ರಾಹಕರ ಹಣವನ್ನು ವಂಚಿಸಿದ ಆರೋಪದಡಿ ಬಂಧಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ರೂ.60 ಲಕ್ಷಕ್ಕೂ ಅಧಿಕ ಹಣ ವಂಚನೆ ನಡೆದಿದೆ ಎನ್ನಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

