ಹುಬ್ಬಳ್ಳಿ ನಡುವೆ ಪ್ರತಿದಿನ ಸಂಚಾರ ನಡೆಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈಗ ಉಭಯ ನಗರಗಳ ನಡುವೆ ಮತ್ತೊಂದು ವಿಮಾನ ಸಂಚಾರ ಆರಂಭವಾಗುತ್ತಿದ್ದು, ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗಲಿದೆ.ರಾಜಧಾನಿ ಬೆಂಗಳೂರು ಮತ್ತು ಉತ್ತರ ಕರ್ನಾಟಕದ ನಡುವೆ ಸಂಚಾರ ಇನ್ನಷ್ಟು ಸುಲಭವಾಗಲಿದೆ. ಬೆಂಗಳೂರು-ಹುಬ್ಬಳ್ಳಿ ನಡುವೆ ಮಧ್ಯಾಹ್ನ ವಿಮಾನ ಬೇಕು ಎಂಬ ಬೇಡಿಕೆಗೆ ಒಪ್ಪಿಗೆ ಸಿಕ್ಕಿದೆ. ಇಂಡಿಗೋ ವಿಮಾನಯಾನ ಸಂಸ್ಥೆ ಮಾರ್ಚ್ 30ರಿಂದಲೇ ಹುಬ್ಬಳ್ಳಿ-ಬೆಂಗಳೂರು ನಗರದ ನಡುವೆ 3ನೇ ವಿಮಾನ ಹಾರಾಟವನ್ನು ನಡೆಸಲಿದೆ. ಈಗಾಗಲೇ ವಿಮಾನದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

