ಕಂದಾಯ ಇಲಾಖೆ ಅಧಿಕಾರಿಗಳು ಜೆಸಿಬಿ ಸಮೇತ ಕೇತಗಾನಹಳ್ಳಿ ಬಳಿ ಆಗಿದೆ ಎನ್ನಲಾದ ಜಮೀನಿನ ಒತ್ತುವರಿ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ. ಕುಮಾರಸ್ವಾಮಿ ಕುಟುಂಬಸ್ಥರ ವಿರುದ್ಧ ಈ ಒತ್ತುವರಿ ಆರೋಪ ಕೇಳಿಬಂದಿತ್ತು. ಬಳಿಕ ಭೂಒತ್ತುವರಿ ಆರೋಪ ಸಂಬಂಧದ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ಐಟಿ ತಂಡವನ್ನು ಕೂಡ ರಚಿಸಿದ್ದರು.ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿ ಬಳಿ ಕುಮಾರಸ್ವಾಮಿ ಅವರ ತೋಟದ ಮನೆ ಇದೆ. ಆದರೆ ಈ ಭಾಗದಲ್ಲಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿರುವ ಆರೋಪ ಕುಮಾರಸ್ವಾಮಿ ಅವರ ವಿರುದ್ಧ ಕೇಳಿಬಂದಿತ್ತು. ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿ ರಾಜ್ಯ ಸರ್ಕಾರಕ್ಕೆ ತರಾಟೆ ಕೂಡ ಆಗಿತ್ತು. ಇದರ ಬೆನ್ನಲ್ಲೇ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ತೆರವಿಗೆ ಅಧಿಕಾರಿಗಳು ಫೀಲ್ಡಿಗಿಳಿದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

