ಕೇರಳದ ಕೋಝಿಕ್ಕೋಡ್ ಹಾಸ್ಟೇಲ್ ನಲ್ಲಿ ಈ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕೊಟ್ಟಾಯಂ ಮೂಲದ ಚೈತನ್ಯ ಕುಮಾರಿ ಎಂದು ಗುರುತಿಸಲಾಗಿದೆ. ಆಕೆ ಮಂಜೂರ್ ಆಸ್ಪತ್ರೆ ಹಾಗೂ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.ವಾರ್ಡನ್ ಮಾನಸಿಕ ಕಿರುಕುಳವೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಲು ಕಾರಣ ಎಂದು ಕುಟುಂಬದವರು ಆರೋಪಿಸಿ ಪ್ರತಿಭಟನೆ ನಡೆಸಿದ್ದರು. ಇದೀಗ ಪ್ರಕರಣ ಸಂಬಂಧ ವಾರ್ಡನ್ ಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

