Breaking News
Oplus_131072

ಮಂಗಳೂರು : ಊಟ ಮಾಡಿ ಮಲಗಿದ್ದ ಮಗುವೊಂದು ಮೃತಪಟ್ಟಿದೆ.

ಮಗುವನ್ನು ಕೊಣಾಜೆ ಮಾಲ ನಿವಾಸಿ ಲಿಂಡೋರಾಜ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿರುವ ಉತ್ತರ ಪ್ರದೇಶ ಮೂಲದ ರಾಜಾ ಸಿಂಗ್ ಮತ್ತು ದಿವ್ಯಾಂಶಿ ಸಿಂಗ್ ದಂಪತಿಯ ಎರಡೂವರೆ ವರ್ಷದ ಪುತ್ರ ರುದ್ರ ಪ್ರತಾಪ್ ಸಿಂಗ್.ಮಧ್ಯಾಹ್ನ ಊಟ‌ ಮಾಡಿ ಮಲಗಿದ್ದ ಮಗುವನ್ನು ಎಬ್ಬಿಸಲೆಂದು ನೋಡುವಾಗ ಏಳದೇ ಇದ್ದುದರಿಂದ ತಕ್ಷಣವೇ ಕಡಬದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದ ವೇಳೆ ಮಗು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮಗು ಆಹಾರ ಸಿಲುಕಿಕೊಂಡು ಅಥವಾ ಯಾವುದೋ ಖಾಯಿಲೆ ಉಲ್ಬಣಗೊಂಡು ಮೃತಪಟ್ಟಿದೆ.ಉಪ್ಪಿನಂಗಡಿ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇಡಲಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *