Breaking News

ಕೊಬ್ಬರಿಗೆ ಬಂಪರ್ ಬೆಲೆ, ತೆಂಗು ಬೆಳೆಗಾರರ ಮೊಗದಲ್ಲಿ ಮಂದಹಾಸ.

ಕೊಬ್ಬರಿ ಕ್ವಿಂಟಾಲ್‌ಗೆ 19 ಸಾವಿರ ರೂ. ದಾಟುವ ಮೂಲಕ ದಾಖಲೆ ಸೃಷ್ಟಿಸಿದೆ. ಕಳೆದ ಕೆಲ ದಿನಗಳಿಂದ ದಿನದಿಂದ ದಿನಕ್ಕೆ ನಿಧಾನವಾಗಿ ಕೊಬ್ಬರಿ ಬೆಲೆ ಏರುತ್ತಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡುತ್ತಿದೆ.ಬಿರುಬೇಸಿಗೆಯಿಂದ ಎಳನೀರಿಗೆ ಭಾರೀ ಬೇಡಿಕೆಯಿದ್ದು, ಸಾಕಷ್ಟು ರೈತರು ಎಳನೀರನ್ನೇ ಮಾರಾಟ ಮಾಡುತ್ತಿರುವುದರಿಂದ ತೆಂಗಿನಕಾಯಿ ಅಷ್ಟಾಗಿ ಲಭ್ಯವಾಗುತ್ತಿಲ್ಲ. ತೆಂಗು ಬೆಳೆಯುತ್ತಿದ್ದ ಪ್ರದೇಶದಲ್ಲಿ ಅಡಿಕೆ ಬೆಳೆ ಆವರಿಸಿದ್ದು, ರೈತರು ಹೆಚ್ಚಾಗಿ ಅಡಿಕೆಗೆ ಒತ್ತು ನೀಡುತ್ತಿದ್ದು, ತೆಂಗಿನ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಳ್ಳದಿರುವುದರಿಂದ ಉತ್ಪಾದನೆ ಕುಂಠಿತವಾಗುತ್ತಿದೆ.ತೆಂಗಿನಕಾಯಿಯೂ ಸಹ ಒಂದಕ್ಕೆ 50 ರೂ.ಗೆ ಮಾರಾಟವಾಗುತ್ತಿದ್ದು, ಯುಗಾದಿ ಹಬ್ಬಕ್ಕೆ 60 ರೂ. ದಾಟಿದರೂ ಅಚ್ಚರಿಯಿಲ್ಲ. ಮಾರುಕಟ್ಟೆಯಲ್ಲಿ ಬೇಡಿಕೆಯಷ್ಟು ಆವಕವಿಲ್ಲದಿರುವುದರಿಂದ ಬೆಳೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *