Breaking News

ಚಿಕ್ಕಬಳ್ಳಾಪುರ: ಪ್ರೀತಿಸಿ ವಿವಾಹವಾದ ಹಿಂದೂ—ಮುಸ್ಲಿಮ್ ಜೋಡಿ!

ಹಿಂದೂ ಯುವಕ ಹಾಗೂ ಮುಸ್ಲಿಮ್ ಯುವತಿ ಪರಸ್ಪರ ಪ್ರೀತಿಸಿ ಪೋಷಕರ ವಿರೋಧದ ನಡುವೆಯೂ ಪೊಲೀಸ್ ಠಾಣೆಯಲ್ಲಿ ಒಂದಾದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪ್ಪನಹಳ್ಳಿಯಲ್ಲಿ ನಡೆದಿದೆ.ಜೋಡಿ ಕಳೆದ 2ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದ್ರೆ ಇವರಿಬ್ಬರ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ ನಾವಿಬ್ಬರು ಜೊತೆಯಾಗಿ ಬದುಕುತ್ತೇವೆ ಎಂದು ಜೋಡಿ ತೀರ್ಮಾನಿಸಿ, ಮನೆ ಬಿಟ್ಟು ಬಂದು ಚಿಕ್ಕಬಳ್ಳಾಪುರ ಪೊಲೀಸ್ ಠಾಣೆಯ ಮೊರೆ ಹೋಗಿದ್ದರು.ಕೊನೆಗೂ ಪೋಷಕರ ವಿರೋಧದ ನಡುವೆಯೂ ಜೋಡಿ ದೇವಸ್ಥಾನವೊಂದರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇನ್ನೂ ಮದುವೆಗೆ ಯುವತಿಯ ಪೋಷಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆ ಸೂಕ್ತ ರಕ್ಷಣೆ ಕೋರಿ ಜೋಡಿ ಪೊಲೀಸರಿಗೆ ಮನವಿ ಮಾಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *