Breaking News

ನೆರೆ ಜಿಲ್ಲೆಗಳಲ್ಲಿ ಬೈಕ್‌ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ.

ಹಾಸನ ತಾಲ್ಲೂಕಿನ ಕಂದಲಿ ಗ್ರಾಮದ ಚಂದ್ರಶೇಖರ್ ಅವರು ತಮ್ಮ ಬೈಕ್ ಕಳ್ಳತನವಾಗಿರುವ ಬಗ್ಗೆ ನಗರದ ಬಡಾವಣೆ ಠಾಣೆಯಲ್ಲಿ ದೂರು ನೀಡಿದ್ದರು. ಹಾಸನ ಉಪವಿಭಾಗದ ಡಿವೈಎಸ್ಪಿ ಮುರಳೀಧರ್ ನೇತೃತ್ವದಲ್ಲಿ ಬಡಾವಣೆ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್‌ ರಾಘವೇಂದ್ರ ಪ್ರಕಾಶ್, ಸಬ್‌ ಇನ್‌ಸ್ಪೆಕ್ಟರ್‌ ಗಿರಿಧರ್ ಹಾಗೂ ತಂಡ, ಮಾರ್ಚ್ 20ರಂದು ಕಾರ್ಯಾಚರಣೆ ನಡೆಸಿದ್ದು, ನಗರದ ಹೊಸ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆರೋಪಿ ಗಗನ್ ಎಂಬಾತನನ್ನು ಬಂಧಿಸಿದೆ ಎಂದು ತಿಳಿಸಿದರು.ಒಟ್ಟು 26 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 16 ಬೈಕ್‌ಗಳು ಹಾಸನ ಜಿಲ್ಲೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣಗಳಿಗೆ ಸೇರಿವೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *