Breaking News

ಚಾಮುಂಡೇಶ್ವರಿ ತಾಯಿ ಭಕ್ತರ ಆಕ್ರೋಶಕ್ಕೆ ಗುರಿಯಾದ ರಕ್ಷಕ್ ಬುಲೆಟ್.

ನಟ ರಕ್ಷಕ್ ಬುಲೆಟ್ ಇದೀಗ ನಾಡದೇವಿ ಚಾಮುಂಡೇಶ್ವರಿ ತಾಯಿ ಭಕ್ತರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ರಿಯಾಲಿಟಿ ಶೋ ಒಂದರಲ್ಲಿ ಭಾಗವಹಿಸಿದ್ದ ರಕ್ಷಕ್ ಬುಲೆಟ್ ಚಾಮುಂಡೇಶ್ವರಿ ತಾಯಿ ಬಗ್ಗೆ ಆಡಿದ್ದ ಮಾತೊಂದು ವಿವಾದಕ್ಕೆ ಕಾರಣವಾಗಿತ್ತು.ಜೀ ಕನ್ನಡದ ‘ಭರ್ಜರಿ ಬ್ಯಾಚುಲರ್ಸ್’ ಸೀಸನ್ 2ರ ಸ್ಪರ್ಧಿಯಾಗಿರುವ ರಕ್ಷಕ್, ಯುವತಿಯನ್ನು ಇಂಪ್ರೆಸ್ ಮಾಡುವ ವೇಳೆ ಚಾಮುಂಡಿದೇವಿ ಜೀನ್ಸ್ ಹಾಕಿ ಗೋವಾ ಟ್ರಿಪ್​ಗೆ ಹೋದಂತಿದೆ ಎಂದೆಲ್ಲ ಮಾತನಾಡಿದ್ದರು. ರಕ್ಷಕ್ ಈ ಹೇಳಿಕೆ ಹಿಂದೂಪರ ಸಂಘಟನೆಗಳು ಮತ್ತು ಚಾಮುಂಡೇಶ್ವರಿ ತಾಯಿ ಭಕ್ತರನ್ನು ಕೆರಳಿಸಿದ್ದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.ನಾನು ಉದ್ದೇಶಪೂರ್ವಕವಾಗಿ ತಾಯಿ ಚಾಮುಂಡೇಶ್ವರಿಯ ಕುರಿತು ಹೇಳುವಷ್ಟು ದೊಡ್ಡವನಲ್ಲ. ನನ್ನ ಡೈಲಾಗ್ ಭಕ್ತರ ಮನಸ್ಸಿಗೆ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಇಂತಹ ಅಚಾತುರ್ಯ ನಡೆಯದಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *