Breaking News

ಅಪರಾಧ : ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಸೂಟ್ ಕೇಸ್ ನಲ್ಲಿ ತುಂಬಿಟ್ಟಿದ್ದ ಅಮಾನುಷ ಘಟನೆ.

ಒಂದು ವರ್ಷದಿಂದ ಬೆಂಗಳೂರಿನ ದೊಡ್ಡ ಕನ್ನಹಳ್ಳಿಯ ಮನೆಯಲ್ಲಿ ವಾಸವಿದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಹಾಗೂ ಗೌರಿ ಅನಿಲ್ ಸಾಂಬೆಕರ್ ದಂಪತಿಗಳಿಬ್ಬರೂ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ವರ್ಕ್ ಫ್ರಂ ಹೋಂ ಆಯ್ಕೆ ಮಾಡಿಕೊಂಡಿದ್ದ ಇಬ್ಬರೂ ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಹುಳಿಮಾವು ಪೊಲೀಸರು ಇವರ ಮನೆಗೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಸೂಟ್ ಕೇಸ್ ನಲ್ಲಿ ತುಂಬಿಟ್ಟಿದ್ದ ಅಮಾನುಷ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡಕನ್ನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಆರೋಪಿ ಪತಿ ರಾಕೇಶ್ ಎಂಬಾತ ತನ್ನ ಪತ್ನಿ ಗೌರಿ ಅನಿಲ್ ಸಾಂಬೆಕರ್ ಅವರನ್ನು ಹತ್ಯೆ ಮಾಡಿ ಮೃತದೇಹವನ್ನು ತುಂಡರಿಸಿ ಸೂಟ್ ಕೇಸ್ನಲ್ಲಿ ತುಂಬಿಟ್ಟಿದ್ದ.ಇದೀಗ ಘಟನೆಯ ಹಿನ್ನೆಲೆಯನ್ನು ತನಿಖೆ ಮಾಡುತ್ತಿದ್ದು, ರಾಕೇಶ್‌ನನ್ನು ವಶಕ್ಕೆ ಪಡೆಯಲು ಶೋಧ ಕಾರ್ಯ ಮುಂದುವರೆಸಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *