Breaking News

ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿ, ಬೈಕ್ ನಲ್ಲಿದ್ದ ದಂಪತಿ ದುರ್ಮರಣ.!

ಅಮವಾಸ್ಯೆ ಪೂಜೆಗೆಂದು ಬೈಕ್ ನಲ್ಲಿ ಜಮೀನಿಗೆ ತೆರಳಿದ್ದ ದಂಪತಿ ಮರಳಿ ತಮ್ಮ ಸ್ವಗ್ರಾಮಕ್ಕೆ‌ ತೆರಳುವಾಗ ರಸ್ತೆ ದಾಟುತ್ತಿರುವಾಗ ಈಚಲಕರಂಜಿಯಿಂದ ಯಾದಗಿರಿಗೆ ತೆರಳುತ್ತಿದ್ದ ಚಿಕ್ಕೋಡಿಗೆ ಘಟಕಕ್ಕೆ ಸೇರಿದ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಶಂಕರಪ್ಪ ಸ್ಥಳದಲ್ಲಿಯೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಶ್ರೀದೇವಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮುಧೋಳ ಸಿಪಿಐ ಮಹಾದೇವ ಶಿರಹಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *