ರಸ್ತೆಯೊಂದರ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬ್ಯಾಂಕ್ ಉದ್ಯೋಗಿ ಮಹಿಳೆಯೊಬ್ಬರ ಜತೆ ಅಸಭ್ಯವಾಗಿ ವರ್ತಿಸಿದ್ದ.ಪ್ರಕರಣ ದಾಖಲಿಸಿಕೊಂಡು ಆತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪುತ್ತೂರಿನ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಕಿರಿಯ ವಿಭಾಗದ ನ್ಯಾಯಾಧೀಶೆ ಅರ್ಚನಾ ಉನ್ನಿತ್ತಾನ್ ಅವರು, 3 ತಿಂಗಳ ಕಠಿಣ ಶಿಕ್ಷೆ, ₹ 6 ಸಾವಿರ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದರೆ 3 ತಿಂಗಳ ಹೆಚ್ಚುವರಿ ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರ ಸಹಾಯಕ ಸರ್ಕಾರಿ ಅಭಿಯೋಜಕಿ ಚೇತನಾದೇವಿ ಬೋಳೂರು ವಾದಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

