ಚೈತ್ರ ಮಾಸದ ಮೊದಲ ದಿನದಂದು ಯುಗಾದಿಯನ್ನು ಆಚರಿಸಲಾಗುತ್ತದೆ. ಆ ದಿನದಿಂದ ‘ವಿಶ್ವವಸು ನಾಮ ಸಂವತ್ಸರ’ ಪ್ರಾರಂಭವಾಗುತ್ತದೆ. ಯುಗಾದಿಯು ಹಿಂದೂ ಹೊಸ ವರ್ಷದ ಆರಂಭವನ್ನು ಸೂಚಿಸುವ ಹಬ್ಬವಾಗಿದೆ. ಯುಗಾದಿ ಎನ್ನುವ ಪದವು ‘ಯುಗ’ ಮತ್ತು ‘ಆದಿ’ ಸಂಸ್ಕೃತ ಪದಗಳಿಂದ ಹುಟ್ಟಿಕೊಂಡಿವೆ, ಇದು ‘ಹೊಸ ಯುಗದ ಆರಂಭ’ವನ್ನು ಸೂಚಿಸುತ್ತದೆ. ಮಹಾರಾಷ್ಟ್ರದಲ್ಲಿ ಗುಡಿ ಪಾಡ್ವಾ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಯುಗಾದಿ ಮತ್ತು ಕರ್ನಾಟಕದಲ್ಲಿ ಯುಗಾದಿ ಎಂದು ವಿಭಿನ್ನ ಹೆಸರುಗಳಲ್ಲಿ ಆಚರಿಸಲಾಗುತ್ತದೆ. ಇದು ಅನಾದಿ ಕಾಲದ ಸಂಪ್ರದಾಯವಾಗಿದೆ.ರಾವಣನನ್ನು ಸಂಹರಿಸಿ ವಿಜಯಿಯಾಗಿ ಹಿಂದಿರುಗಿದ ಶ್ರೀರಾಮನ ಪಟ್ಟಾಭಿಷೇಕದ ದಿನವೆಂದೂ ಪುರಾಣವಿದೆ. ಸೂರ್ಯನ ಮೊದಲ ಕಿರಣ ಭುವಿಯನ್ನು ಸ್ಪರ್ಶಿಸಿದ ದಿನವೆಂತಲೂ ಪ್ರತೀತಿ ಇದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





