ವಿದ್ಯಾರ್ಥಿನಿ ಐಶ್ವರ್ಯ ಲಕ್ಷ್ಮಿ ಆತ್ಮಹತ್ಯೆ ಇದೀಗ ಸ್ಪೋಟಕ ತಿರುವು ಸಿಕ್ಕಿದೆ ಐಶ್ವರ್ಯ ಪ್ರಿಯಕರ ಆಕಾಶ್ ಬೇರೊಬ್ಬ ಯುವತಿಯನ್ನು ಲವ್ ಮಾಡುತ್ತಿದ್ದ. ಅದಕ್ಕಾಗಿ ಐಶ್ವರ್ಯ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಆಕಾಶ್ ಮತ್ತು ಐಶ್ವರ್ಯ ಲಕ್ಷ್ಮಿ ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು.ಇಬ್ಬರು ವಿಜಯಪುರ ಜಿಲ್ಲೆಯ ಚಡಚಣ ಮೂಲದವರು ಎಂದು ತಿಳಿದು ಬಂದಿದೆ. ಆಕಾಶ್ ಇತ್ತೀಚಿಗೆ ಮತ್ತೊಬ್ಬ ಯುವತಿಯ ಜೊತೆಗೆ ಲವ್ ಮಾಡುತ್ತಿದ್ದ.ಈ ವಿಚಾರ ಗೊತ್ತಾಗಿ ಪಿಜಿಯಲ್ಲಿ ನೇಣು ಬಿಗಿದುಕೊಂಡು ಐಶ್ವರ್ಯ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಎಪಿಎಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

