ಉಡುಪಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಅಪಹರಣ ನಡೆದಿದ್ದು, ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ಒಂದೆಡೆ ಮುಸ್ಲಿಂ ಸಮುದಾಯದ ಯುವಕನೋರ್ವನ ಯುವತಿಯ ಕರೆದೊಯ್ದಿದ್ದು ಮದುವೆಯಾಗಲು ನೋದಂಣಿ ಮಾಡಿಸಿದ್ದಾನೆ. ಇನ್ನೊಂದೆಡೆ ತನ್ನ ಮಗಳನ್ನು ಅಪಹರಣ ಮಾಡಲಾಗಿದೆ ಎಂದು ವಿದ್ಯಾರ್ಥಿನಿ ತಂದೆ ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಅಕ್ರಮ್ ಮೊಹಮ್ಮದ್ ಎಂಬ ವ್ಯಕ್ತಿ ತನ್ನ ಸ್ಕೂಟರ್ ನಲ್ಲಿ ಆಕೆಯನ್ನು ಅಪಹರಿಸಿದ್ದಾನೆ ಎಂದು ಗಾಡ್ವಿನ್ ದೇವದಾಸ್ ಎಂಬುವವರು, ದೂರು ನೀಡಿದ್ದಾರೆ. ಕಳೆದ ಮಾ.20ರಂದು ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

