Breaking News
Oplus_131072

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದ ಖಾಸಗಿ ಬಸ್ ಚಾಲಕ,ಆರೋಪಿಗಳ ಬಂಧನ.

ಬೆಳಗಾವಿ ಮೂಲದ ಮಹಿಳೆ ಉಚ್ಚಂಗಿದುರ್ಗದ ಉಚ್ಚಂಗೆಮ್ಮನ ಜಾತ್ರೆಗೆ ಬಂದಿದ್ದರು. ಜಾತ್ರೆ ಮುಗಿಸಿಕೊಂಡು ದಾವಣಗೆರೆಗೆ ಹೋಗಲು ಮಹಿಳೆ ಮಂಗಳವಾರ ರಾತ್ರಿ ಬಸ್ಸಿಗಾಗಿ ಕಾಯುತ್ತಿದ್ದರು.ಬಸ್​ನಲ್ಲಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಮಾತ್ರ ಇದ್ದರು.​ ಎರಡು ಸಣ್ಣ ಮಕ್ಕಳೊಂದಿಗೆ ಒಬ್ಬಂಟಿ ಮಹಿಳೆ ಇರುವುದನ್ನು ಮೂರು ಜನ ಆರೋಪಿ‌ಗಳು ಗಮನಿಸಿದ್ದಾರೆ.ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುತ್ತಿದ್ದ ವೇಳೆ ಮಹಿಳೆ ಕಿರುಚಾಡಿದ್ದಾರೆ. ಮಹಿಳೆಯ ಕಿರುಚಾಟ ಕೇಳಿ ಸಾರ್ವಜನಿಕರು ರಕ್ಷಣೆ ಮಾಡಿದ್ದಾರೆ. ವಿಜಯನಗರ ತಾಲೂಕಿನ ಉಚ್ಚಂಗಿದುರ್ಗದ ಚನ್ನಾಪುರ ಗ್ರಾಮದ ಬಳಿ ಘಟನೆ ನಡೆದಿದೆ.ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *