Breaking News

ಕೆರೆಯಲ್ಲಿ ಈಜಲು ತೆರೆಳಿದ್ದ ಇಬ್ಬರು ಯುವಕರು ನೀರು ಪಾಲು.

ವಿಜಯಪುರ ನಗರದ ಆರು ಜನ ಯುವಕರು ಈಜಾಡಲು ಕುಮಟಗಿ ಕೆರೆತೆ ತೆರಳಿದ್ದರು. ಆರು ಜನ ಯುವಕರು ಈಜಾಡುವ ವೇಳೆ ಇಬ್ಬರು ನೀರು ಪಾಲಾಗಿದ್ದಾರೆ. ನಾಲ್ವರು ಯುವಕರು ಈಜಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮೃತ ಇಬ್ಬರಲ್ಲಿ, ಓರ್ವ ಯುವಕನನ್ನು ಕೆರೆಯಿಂದ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರಾದೃಷ್ಟಕ್ಕೆ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನೀರಲ್ಲಿ ಮುಳುಗಿರುವ ಮತ್ತೋರ್ವ ಯುವಕನಿಗಾಗಿ ಶೋಧ ಕಾರ್ಯ ನಡೆದಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ವಿಜಯನಗರ : ಕ್ಷುಲ್ಲಕ ಕಾರಣಕ್ಕೆ ಗಲಾಟೆ – ರುಬ್ಬುಗುಂಡಿನ ಕಲ್ಲಿನಿಂದ ಹೊಡೆದು ಯುವಕನ ಭೀಕರ ಕೊಲೆ

ಹೊಸಪೇಟೆ: ನಗರದ ಸಿದ್ದಲಿಂಗಪ್ಪ ಚೌಕಿಯ 4ನೇ ಕ್ರಾಸ್‌ನ ಎಲ್ಲಮ್ಮ ದೇವಸ್ಥಾನದ ಬಳಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ …

Leave a Reply

Your email address will not be published. Required fields are marked *