Breaking News

ಆಶ್ರಮದ ಪಾಲಾದ ಹಿರಿಯ ನಟ ಸುದರ್ಶನ್ ಪತ್ನಿಯ ನೆರವಿಗೆ ನಿಂತ ದರ್ಶನ್‌.

ತಾವೇ ಕಷ್ಟದ ದಿನಗಳನ್ನು ಎದುರಿಸುತ್ತಿದ್ದರೂ ಕೂಡ ದರ್ಶನ್‌ ಇತರರಿಗೆ ಸಹಾಯ ಮಾಡುವುದನ್ನು ತಪ್ಪಿಸಿಲ್ಲ.ಕೊಲೆ ಪ್ರಕರಣ, ಜೈಲು, ಜಾಮೀನು ಈ ರೀತಿ ತಾವೇ ಸಂಕಷ್ಟದ ದಿನಗಳನ್ನು ಎದುರಿಸುತ್ತಿರುವ ನಟ ದರ್ಶನ್‌, ಆಶ್ರಮದ ಪಾಲಾಗಿದ್ದ ಹಿರಿಯ ನಟ ಸುದರ್ಶನ್‌ ಪತ್ನಿ ಶೈಲಶ್ರೀ ಅವರ ನೆರವಿಗೆ ನಿಂತಿದ್ದು, ಯಾರೂ ಇಲ್ಲದೇ ಆಶ್ರಮ ಪಾಲಾಗಿದ್ದ ಅವರ ಖರ್ಚುಗಳನ್ನು ನೋಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ನಿರ್ದೇಶಕ ಹಾಗೂ ಹಿರಿಯ ಪತ್ರಕರ್ತ ಗಣೇಶ್‌ ಕಾಸರಗೋಡು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಲಗೈ ಕೊಟ್ಟದ್ದು ಎಡಗೈಗೆ ಗೊತ್ತಾಗಬಾರದು ಎಂಬ ನಿಲುವಿನ ದರ್ಶನ್ ಎಷ್ಟೇ ಗುಪ್ತವಾಗಿ ಈ ದೊಡ್ಡ ಸಹಾಯವನ್ನು ಮಾಡಿದರೂ ಸುದ್ದಿ ಹೊರಬಿದ್ದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *