Breaking News

ವಕ್ಫ್‌ ತಿದ್ದುಪಡಿ ಮಸೂದೆಯಲ್ಲಿ 1 ಬದಲಾವಣೆ ಸೂಚಿಸಿದ ಎನ್‌ಡಿಎ ಮಿತ್ರಪಕ್ಷ ಟಿಡಿಪಿ;

ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರಿಗೆ ಅವಕಾಶ ನೀಡುವ ಅಂಶದ ಬಗ್ಗೆ ಪಕ್ಷ ಎತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.ಮಸೂದೆಗೆ ಬೆಂಬಲ ನೀಡಿರುವ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಾರ್ಟಿ 1 ಪ್ರಮುಖ ಬದಲಾವಣೆಯನ್ನು ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್‌ನಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಅವರು ತಮ್ಮ ಪಕ್ಷವು ಮುಸ್ಲಿಮ್‌ ಸಮುದಾಯದ ಅನುಕೂಲಕ್ಕೆ ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದ್ದರು. ಜತೆಗೆ ರಾಜ್ಯದಲ್ಲಿನ ವಕ್ಫ್ ಆಸ್ತಿಗಳನ್ನು ರಕ್ಷಿಸಲು ಬದ್ಧವಾಗಿದೆ ಎಂದು ಭರವಸೆ ನೀಡಿದ್ದರು. “ಟಿಡಿಪಿ ಆಡಳಿತದಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ದೊರೆತಿದೆ. ಎನ್‌ಡಿಎ ಅಧಿಕಾರದಲ್ಲಿದ್ದರೆ ಮುಸ್ಲಿಮರು ಎಲ್ಲ ರೀತಿಯ ಸೌಲಭ್ಯ ದೊರೆಯಲಿದೆ” ಎಂದು ಅವರು ಹೇಳಿದ್ದರು.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *