ಪೊಲೀಸರ ದಾಖಲೆಗಳ ಪ್ರಕಾರ ಮಲ್ಲಿಗೆ ಎಂಬಾಕೆ ಆಕೆಯ ಗಂಡನ ಕೈಯಿಂದಲೇ ಹತ್ಯೆ ಆಗಿ ಅದಾಗಲೇ ಐದು ವರ್ಷ ಆಗಿ ಹೋಗಿದೆ. ಆಕೆಯನ್ನು ಕೊಲೆ ಮಾಡಿದ್ದಾಕ್ಕಾಗಿ ಗಂಡ ಸುರೇಶ್ ಎರಡು ವರ್ಷ ಜೈಲೂಟ ಕೂಡ ಮಾಡಿ ಬಂದಿದ್ದಾರೆ. ಆದರೆ, ವಿಚಿತ್ರ ಎಂದರೆ, ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಲ್ಲಿಗೆ ಮಂಗಳವಾರ ಸಂಜೆ ಮಡಿಕೇರಿ ನಗರದ ಹೋಟೆಲ್ ಒಂದರಲ್ಲಿ ತಿಂಡಿ ತಿನ್ನುತ್ತಾ ಇರುವುದು ಸುರೇಶ್ಗೆ ಕಾಣಿಸಿದೆ. ಅದೂ ಕೂಡ ಆಕೆಯ ಲವರ್ ಜತೆ! ಇದನ್ನು ಗಂಡ ಸುರೇಶ್ನ ಸ್ನೇಹಿತರು ನೋಡಿ, ತಕ್ಷಣವೇ ಪೊಲಿಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮಡಿಕೇರಿ ನಗರ ಪೊಲಿಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಹಾಗೆಯೇ ಅಂದು ಪತ್ತೆಯಾದ ದೇಹ ಯಾರದ್ದು, ಆಕೆಯನ್ನು ಯಾರು ಕೊಲೆ ಮಾಡಿದ್ದು ಈ ಎಲ್ಲಾ ವಿಚಾರಗಳು ಇದೀಗ ಹೊಸ ತನಿಖೆಯಿಂದ ಬೆಳಕಿಗೆ ಬರಬೇಕಿದೆ. ಹಾಗೇಯೇ ಈ ಮೂಲಕ ಅಮಾಯಕ ಆದಿವಾಸಿ ಸುರೇಶ್ ಮತ್ತು ಆತನ ಕುಟುಂಬಕ್ಕೆ ನ್ಯಾಯ ದೊರಕಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

