ಸಾಹಿತಿ, ವಿದ್ವಾಂಸ ಪಿ. ವಿ. ನಾರಾಯಣ (82) ಅವರು ಇಂದು ಬೆಳಿಗ್ಗೆ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಜಯನಗರದ 8ನೇ ಬ್ಲಾಕ್ನ ಹೇಮಂತ ಅರಿಷ್ಠ ಅಪಾರ್ಟ್ಮೆಂಟ್ನಲ್ಲಿ ಅವರು ಇಹಲೋಕ ತ್ಯಜಿಸಿದ್ದು ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಅವರ ವಚನ ವ್ಯಾಸಂಗ ಕೃತಿಗೆ ಇಳಕಲ್ಲಿನ ಶ್ರೀವಿಜಯ ಮಹಂತೇಶ ಮಠ ಪುರಸ್ಕಾರ, ಸಮಾಜದ ಮೇಲೆ ವಿಜ್ಞಾನದ ಪ್ರಭಾವ ಕೃತಿಗೆ ರಾಜ್ಯ ಸಾಹಿತ್ಯ ಅಕಾಡಮಿ ಬಹುಮಾನ ಮತ್ತು ಆರ್ಯಭಟ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳು ಲಭಿಸಿವೆ.ಮಧ್ಯಾಹ್ನ 3:00 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

