Breaking News
Oplus_131072

ಅಪಘಾತದಲ್ಲಿ ಅರಸ್ ಕುಟುಂಬ ದುರಂತ ಅಂತ್ಯ: ಭೀಕರ ಅಪಘಾತ.

ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಅಪಘಾತ ಮಂಡ್ಯ ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ನಡೆದಿದೆ. ಇನ್ನು ಈ ದುರಂತದಲ್ಲಿ ಅರಸು ಕುಟುಂಬ ದುರಂತ ಅಂತ್ಯ ಕಂಡಿದೆ.ಮೃತ ಸತ್ಯಾನಂದರಾಜೇ ಅರಸ್ ಹಾಗೂ ಚಂದ್ರರಾಜೇ ಅರಸ್ ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳು. ಚಂದ್ರರಾಜೇ ಅರಸ್ ಪತ್ನಿ ಸುವೇದಿನಿ ರಾಣಿ, ಸಹೋದರ ಸತ್ಯಾನಂದರಾಜೇ ಅರಸ್, ಪತ್ನಿ ನಿಶ್ಚಿತಾ ತೆರಳುತ್ತಿದ್ದರು. ಚಂದ್ರರಾಜೇ ಅರಸ್ ಕಾರು ಚಾಲನೆ ಮಾಡುತ್ತಿದ್ದರು. ಸತ್ಯಾನಂದರಾಜೇ ಅರಸ್​ ಎಲೆಕ್ಟ್ರಿಕ್ ಕಂಟ್ರ್ಯಾಕ್ಟರ್ ಆಗಿದ್ದರೆ, ಚಂದ್ರರಾಜೇ ಅರಸ್ ನಿವೃತ್ತ ಜೆಇ. ಸದ್ಯ ಮೃತದೇಹಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *