Breaking News
Oplus_131072

ಮಡಿಕೇರಿ : ಸತ್ತವಳು 5 ವರ್ಷದ ಬಳಿಕ ಬದುಕಿ ಬಂದಳು ; ಪತ್ನಿಯ ಹತ್ಯೆ ಆರೋಪದಡಿ ಶಿಕ್ಷೆ ಅನುಭವಿಸಿದ ಪತಿಗೆ ಶಾಕ್.!

ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಶಿಕ್ಷೆಯನ್ನು ಅನುಭವಿಸಿದ್ದ. ಆದರೆ ಇದೀಗ ಆತನಿಗೆ ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಅದೇ ಹೆಂಡತಿ ಹೋಟೆಲ್​​ನಲ್ಲಿ ಕುಳಿತುಕೊಂಡು ತಿಂಡಿ ತಿನ್ನುತ್ತಿರುವುದು ಕಾಣಿಸಿದೆ.ನವೆಂಬರ್​ನಲ್ಲಿ ಪತ್ನಿ ಮಲ್ಲಿಗೆ ಏಕಾಏಕಿ ನಾಪತ್ತೆಯಾಗಿದ್ದಾಳೆ. ಹಾಗಾಗಿ ಸುರೇಶ್ ಕುಶಾಲನಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಒಂದಷ್ಟು ದಿನ ಹುಡುಕಿದರೂ ಮಲ್ಲಿಗೆ ಸಿಕ್ಕಿಲ್ಲ.ಇಷ್ಟೆಲ್ಲ ಬೆಳವಣಿಗೆಗಳು ನಡೆಯುತ್ತಿರುವಾಗ ಇದ್ದಕ್ಕಿದ್ದ ಹಾಗೆ ಕೊಲೆಯಾಗಿದ್ದಾಳೆ ಎಂಬುದಾಗಿ ಭಾವಿಸಲಾಗಿದ್ದ ಮಲ್ಲಿಗೆ ಜೀವಂತವಾಗಿ ಮಡಿಕೇರಿ ಹೋಟೆಲ್​​ನಲ್ಲಿ ತಿಂಡಿ ತಿನ್ನುತ್ತಾ ಇರುವುದು ಸುರೇಶ್ ಹಾಗೂ ಅವರ ಸ್ನೇಹಿತರ ಕಣ್ಣಿಗೆ ಬಿದ್ದಿದೆ. ಈ ಅವಕಾಶ ಬಿಟ್ಟರೆ ಮತ್ತೆ ಸಿಗಲ್ಲ ಎಂದು ಯೋಚಿಸಿದ ಸುರೇಶ್​ ಮತ್ತು ಆತನ ಸ್ನೇಹಿತರು ಮಡಿಕೇರಿ ಪೊಲಿಸರ ಸಹಾಯ ಪಡೆದು ಮಲ್ಲಿಗೆಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆಕೆ ತನ್ನ ಪ್ರಿಯಕರ ಗಣೇಶನ ಜೊತೆ ವಿರಾಜಪೇಟೆ ತಾಲ್ಲೂಕಿನ ಟಿ. ಶೆಟ್ಟಿಗೇರಿ ಗ್ರಾಮದಲ್ಲಿ ವಾಸವಿರುವುದಾಗಿ ಹೇಳಿದ್ದಾಳೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *