.ನರಸೀಪುರದ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುವುದು ಬೇಡ ಎಂದು ಮಹೇಶ್ ತನ್ನ ಪತ್ನಿ ಸುಧಾಳಿಗೆ ಹೇಳಿದ ಹಿನ್ನಲ್ಲೆ ಶುಕ್ರವಾರ ಬೆಳಿಗ್ಗೆ ಮನೆಯಲ್ಲಿದ್ದ ಸೀಮೆಎಣ್ಣೆಯನ್ನು ಸುಧಾ ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ.ಕುಂತೂರು ಗ್ರಾಮದಲ್ಲಿ ದಂಪತಿಗಳಿಬ್ಬರು ಬೆಂಕಿ ಹಚ್ಚಿಕೊಂಡು ಗಂಡ ಹೆಂಡತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ.ಇದನ್ನು ಕಂಡ ಸ್ಥಳೀಯರು ತಕ್ಷಣ ಬೆಂಕಿಯನ್ನು ನಂದಿಸಿ ಕೊಳ್ಳೇಗಾಲ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಾ.ನಗರ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

