Breaking News
Oplus_131072

ಜಾತ್ರೆಗೆ ಬಂದಿದ್ದ ಮಹಿಳೆ ಮೇಲೆ ಬಸ್ ನಲ್ಲಿ ಮಕ್ಕಳ ಎದುರೇ ಸಾಮೂಹಿಕ ಅತ್ಯಾಚಾರ: ಮೂವರು ಅರೆಸ್ಟ್.!

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದ ಚನ್ನಾಪುರ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ಘಟನೆ ನಡೆದಿದ್ದು, ಬೆಳಗಾವಿ ಮೂಲದ ಮಹಿಳೆ ಉಚ್ಚಂಗಿದುರ್ಗದ ಉಚ್ಚಂಗೆಮ್ಮ ಜಾತ್ರೆಗೆ ಮಕ್ಕಳ ಜೊತೆ ಬಂದಿದ್ದರು. ಜಾತ್ರೆ ಮುಗಿಸಿಕೊಂಡು ದಾವಣಗೆರೆಗೆ ಹೋಗಲು ಬಸ್ ಹತ್ತಿದಾಗ ಬಸ್ ಸಿಬ್ಬಂದಿ ಅತ್ಯಾಚಾರ ಎಸಗಿದ್ದಾರೆ. ಬನಶಂಕರಿ ಎಂಬ ಹೆಸರಿನ ಖಾಸಗಿ ಬಸ್ ಆರೋಪಿಗಳು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುತ್ತಿದ್ದ ವೇಳೆ ಮಹಿಳೆ ಕಿರುಚಾಡಿದ್ದಾರೆ. ಮಹಿಳೆಯ ಕಿರುಚಾಟ ಕೇಳಿ ಸಾರ್ವಜನಿಕರು ರಕ್ಷಿಸಿದ್ದಾರೆ.ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *