ಉತ್ತರ ಪ್ರದೇಶದಲ್ಲಿ ನಡೆದಿರುವ ಘಟನೆಯೊಂದು ಪ್ರತಿಯೊಬ್ಬರ ಕಣ್ಣಲ್ಲಿ ನೀರು ತರಿಸುವಂತಿದೆ. ತಂದೆಯ ಪಿಂಚಣಿ ಹಣಕ್ಕಾಗಿ ತಾಯಿಯ ಮೃತ ದೇಹವನ್ನ ಮಕ್ಕಳೇ ಐದು ತಿಂಗಳ ಕಾಲ ಬಚ್ಚಿಟ್ಟಿರುವ ಅಮಾನಅಮರಾವತಿ ದೇವಿಯವರು ಸಾವನ್ನಪ್ಪಿದ್ದರೂ ಅವರ ಮಕ್ಕಳು ನೆರೆಹೊರೆಯವರಿಗೆ ಅನುಮಾನ ಬಾರದಂತೆ ಮೃತ ದೇಹವನ್ನ ಬಚ್ಚಿಟ್ಟಿದ್ದಾರೆ ಅನ್ನೋ ಮಾಹಿತಿ ನೀಡಿದ್ದರು. ನಂತರ ತನಿಖೆ ಕೈಗೊಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿತು ಅಂತಾ ಭುಲ್ಪುರ್ ಸಂಚಾರ ಪೊಲೀಸ್ ಅಧಿಕಾರಿ ಎ.ಪಿ.ಸಿಂಗ್ ತಿಳಿಸಿದ್ದಾರೆ.ವೀಯ ಘಟನೆ ನಡೆದಿದೆ.ತಾಯಿಯ ಮೃತದೇಹವು ಕೊಳೆಯದಂತೆ ಅದಕ್ಕೆ ರಾಸಾಯನಿಕವನ್ನು ಸಿಂಪಡಿಸಿದ್ದಾರೆ. ನೆರೆಹೊರೆಯವರಿಗೆ ವಾಸನೆ ಬಾರದಂತೆ ಮನೆಯಲ್ಲಿ ಲೋಬಾನ ಹಾಕುತ್ತಿದ್ದರಂತೆ. ಆರೋಪಿಗಳಿಗೆ ಅವರ ಪತ್ನಿಯರು ಸಹ ಸಾಥ್ ನೀಡಿರುವುದು ತನಿಖೆಯ ವೇಳೆ ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಕ್ಕಳಿಗೆ ಛಿಮಾರಿ ಹಾಕಿದ್ದು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಅಲ್ಲದೇ ಈ ಹೀನಕೃತ್ಯದಲ್ಲಿ ಭಾಗಿಯಾದ ಮಕ್ಕಳು ಮತ್ತು ಅವರ ಪತ್ನಿಯರ ವಿರುದ್ಧ ಐಪಿಸಿ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

