ತಮಿಳುನಾಡು ಮೂಲದ ಸುರೇಶ್ ಬಾಲಾಜಿ ಬ್ಯಾಡ್ಮಿಂಟನ್ ಕೋಚ್ ಆಗಿದ್ದು, ಬ್ಯಾಡ್ಮಿಂಟನ್ ಹೇಳಿಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯರನ್ನು ಕೋಚ್ ಲೈಂಗಿಕವಾಗಿ ಬಳಸಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಬ್ಯಾಡ್ಮಿಂಟನ್ ಕೋಚಿಂಗ್ ಸೇರಿದ್ದ ಬಾಲಕಿಯನ್ನು ಆಗಾಗ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಯಾರ ಬಳಿಯೂ ಬಾಯಿ ಬಿಡದಂತೆ ಬಾಲಕಿಗೆ ಹೇಳಿದ್ದ.ಬ್ಯಾಡ್ಮಿಂಟನ್ ಕೋಚಿಂಗ್ ಬರುತ್ತಿದ್ದ ಬಾಲಕಿಯರೊಂದಿಗೆ ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ. ಇದನ್ನು ಯಾರಿಗೂ ಹೇಳದಂತೆ ಹೆದರಿಸಿದ್ದ. ಹೀಗಾಗಿ ಇದುವರೆಗೂ ಬಾಲಕಿಯರು ಬಾಯ್ಬಿಟ್ಟಿಲ್ಲ. ಆದ್ರೆ, ಓರ್ವ ಬಾಲಕಿ ಅಜ್ಜಿ ಮೊಬೈಲ್ನಿಂದ ತನ್ನ ನಗ್ನ ಫೋಟೋವನ್ನು ಕಳುಹಿಸಿದಾಗ ಕೋಚರ್ ಸುರೇಶನ ನವರಂಗಿ ಆಟ ಬಯಲಿಗೆ ಬಿದ್ದಿದ್ದು, ಬಳಿಕ ಇನ್ನುಳಿದ ಬೇರೆ ಬಾಲಕಿಯರ ಮೇಲೆ ಲೈಂಗಿಕದ ದೌರ್ಜನ್ಯ ಎಸಗಿರುವುದು ಗೊತ್ತಾಗಿದೆ. ಹೀಗಾಗಿ ಪೊಲೀಸರು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಅಪ್ರಾಪ್ತೆ ಬಾಲಕಿಯರ ಹೇಳಿಕೆ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

