Breaking News

ಗುತ್ತಿಗಾರು : ವಿಷ ಸೇವನೆ, ಮಗ ಸಾವು; ತಾಯಿ ಸ್ಥಿತಿ ಗಂಭೀರ.!!!

ನಿತಿನ್‌ ಐಟಿಐ ವಿದ್ಯಾಭ್ಯಾಸ ಹೊಂದಿದ್ದು, ತಮ್ಮ ಜಮೀನಿನಲ್ಲಿ ಕೃಷಿಕರಾಗಿ ದುಡಿಯುತ್ತಿದ್ದರು. ಒಂದು ವರ್ಷದ ಹಿಂದೆ ದೀಕ್ಷಾ ಅವರನ್ನು ವಿವಾಹವಾಗಿದ್ದು, ಅವರು ಸ್ಥಳೀಯ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದರು. ದೀಕ್ಷಾ ತವರು ಮನೆಗೆ ಹೋಗಿದ್ದು, ಈ ಸಂದರ್ಭದಲ್ಲಿ ತಾಯಿ ಸುಲೋಚನಾ ಹಾಗೂ ಮಗ ನಿತಿನ್‌ ವಿಷ ಸೇವಿಸಿದ್ದರು.ನಿತಿನ್‌ ಮೃತಪಟ್ಟಿದ್ದು, ಅವರ ತಾಯಿ ಸುಲೋಚನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರೂ ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದಾರೆ ಎನ್ನಲಾಗಿದ್ದು, ರವಿವಾರ ಮುಂಜಾನೆ ಇಬ್ಬರೂ ಅಸ್ವಸ್ಥಗೊಂಡಿದ್ದರು.ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *