Breaking News

ಹೊಸ ಪಕ್ಷದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ!

ಬಿಜೆಪಿಯಿಂದ 6 ವರ್ಷಗಳ ಅವಧಿಗೆ ಉಚ್ಚಾಟಿತರಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಾಂಗ್ರೆಸ್‌ ಪಕ್ಷವನ್ನು ಸೇರುವ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿರುವ ಅವರು ಹಲವು ವಿಷಯಗಳ ಬಗ್ಗೆ ಮಾನತಾಡಿದ್ದಾರೆ. ಯತ್ನಾಳ್ ಅವರು ಈಚೆಗಷ್ಟೇ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಮುಖಂಡರೊಬ್ಬರೊಂದಿಗೆ ರಹಸ್ಯ ಸಭೆ ನಡೆಸಿದ್ದರು. ಇದೀಗ ವಿವಿಧ ವಿಷಯಗಳ ಬಗ್ಗೆಯೂ ಅವರು ಮಾತನಾಡಿದ್ದು. ಕಾಂಗ್ರೆಸ್‌ ಸೇರುವ ಬಗ್ಗೆಯೂ ಸ್ಪಷ್ಟನೆ ಕೊಟ್ಟಿದ್ದಾರೆ.ಇನ್ನು ಇದೇ ಸಂದರ್ಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಾಂಗ್ರೆಸ್‌ ಪಕ್ಷ ಸೇರುವ ಬಗ್ಗೆಯೂ ಮಾತನಾಡಿದ್ದಾರೆ. ನಾನು ಅಲ್ಲ ನನ್ನ ಹೆಣ ಹಾಗೂ ಚಪ್ಪಲಿನೂ ಕಾಂಗ್ರೆಸ್‌ಗೆ ಹೋಗಲ್ಲ ಅಂತ ಹೇಳಿದ್ದಾರೆ. ಹೊಸ ಪಕ್ಷದ ಬಗ್ಗೆ ಆಲೋಚನೆ ಇದೆ. ಅದು ಅಷ್ಟ ಸುಲಭವೂ ಇಲ್ಲ. ಹಿಂದೂಗಳ ಮತ ವಿಭಜನೆ ಆಗಬಾರದು ಎನ್ನುವುದು ನನ್ನ ಪ್ಲ್ಯಾನ್. ನಾನು ಪಕ್ಕ ಪ್ಲ್ಯಾನ್ ಮಾಡ್ದೀನಿ ಎನ್ನುವ ಮೂಲಕ ಪರೋಕ್ಷವಾಗಿ ಹೊಸ ಪಕ್ಷದ ಸುಳಿವು ನೀಡಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *