Breaking News

ಲಕನೋ: ಮದ್ಯ ಕುಡಿಸಿ ವಿದ್ಯಾರ್ಥಿನಿ ಮೇಲೆ ನಡೀತು ಗ್ಯಾಂಗ್‌ ರೇಪ್!

ಮಾರ್ಚ್ 29 ರಂದು ತನ್ನನ್ನು ಸ್ನೇಹಿತೆಯೊಬ್ಬಳು ಪಿಶಾಚ್‌ಮೋಚನ್ ಪ್ರದೇಶದ ಹುಕ್ಕಾ ಬಾರ್‌ಗೆ ಕರೆದೊಯ್ದಿದ್ದಳು. ಅಲ್ಲಿ ಆಕೆಯೊಂದಿಗೆ ಇತರ ಪುರುಷರು ಕೂಡಾ ಸೇರಿಕೊಂಡಿದ್ದಾರೆ. ತನಗೆ ಅಮಲು ಪದಾರ್ಥ ಬೆರೆಸಿದ ತಂಪು ಪಾನೀಯವನ್ನು ನೀಡಿ, ನಂತರ ಸಿಗ್ರಾ ಪ್ರದೇಶದ ವಿವಿಧ ಹೋಟೆಲ್‌ಗಳಿಗೆ ಕರೆದೊಯ್ದು, ಅಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.ಉತ್ತರ ಪ್ರದೇಶ ಪೊಲೀಸರು 23 ಪುರುಷರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ, ಅವರಲ್ಲಿ 11 ಮಂದಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಈವರೆಗೆ ಆರು ಪುರುಷರನ್ನು ಪೊಲೀಸರು ಬಂಧಿಸಿದ್ದಾರೆ.ದೂರಿನ ಆಧಾರದ ಮೇಲೆ, ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇನ್ನು ಸಂತ್ರಸ್ತ ವಿದ್ಯಾರ್ಥಿನಿ ಅಪ್ರಾಪ್ತ ವಯಸ್ಕಳಲ್ಲ ಎಂದು ಡಿಸಿಪಿ ಮೀನಾ ಸ್ಪಷ್ಟಪಡಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *