ಬನಂಶಕರಿ 6ನೆ ಹಂತದ ರೆಸ್ಟೋರೆಂಟ್ ಸಮೀಪ ಈ ಯುವಕ ರಾತ್ರಿನಡೆದು ಹೋಗುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಹಾಕಿ ಏಕಾಏಕಿ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ತಲೆ, ಕೈ-ಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಲ್ಲೆಯಿಂದ ಗಂಭೀರಗಾಯಗೊಂಡು ಈತ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಈ ಯುವಕ ಬಿಳಿ ಶರ್ಟ್ ಹಾಗೂ ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದಾನೆ. ಸುದ್ದಿ ತಿಳಿದು ಕೆಂಗೇರಿ ಠಾಣೆ ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಶೀಲಿಸಿ, ಮೃತದೇಹವನ್ನು ಆರ್‌ಆರ್‌ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

