Breaking News

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಏ.15ಕ್ಕೆ ಮುಂದೂಡಿಕೆ…

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜಾಮೀನು ಅರ್ಜಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.ವಿಚಾರಣೆ ಆರಂಭವಾದಾಗ ಹೈಕೋರ್ಟ್ ನ್ಯಾಯಾಧೀಶರು ಎಸ್ ಪಿ ಪಿ ಅವರಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದರು. ಬಳಿಕ ಜಾಮೀನು ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿ ಆದೇಶಿಸಿದರು. ಈ ಹಿಂದೆ ಕೆ.ಆರ್‌ ನಗರ ಸಂತ್ರಸ್ತ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ, ಆದ್ದರಿಂದ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಪ್ರಜ್ವಲ್‌ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತು

Share News

About BigTv News

Check Also

ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ನಕಲಿ ಔಷಧ ಮಾರಾಟದ ಕಿಂಗ್‌ಪಿನ್‌ ವೀರೇಶ್‌ಕುಮಾರ್‌

ನಕಲಿ ಔಷಧ ದಂಧೆಯ ಪ್ರಮುಖ ಆರೋಪಿ ವೀರೇಶ್‌ಕುಮಾರ್‌ ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ಎಂಬುದು ಎಸ್‌ಐಟಿ ತನಿಖೆಯಿಂದ ತಿಳಿದುಬಂದಿದೆ. …

Leave a Reply

Your email address will not be published. Required fields are marked *