ಗಡಿನಾಡು ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಡಿಕೆಶಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಭಾ ಕಾರ್ಯಕ್ರಮದಲ್ಲಿ ನಳಿನ್ ಮತ್ತು ಡಿಕೆಶಿ ಒಂದೇ ವೇದಿಕೆಯಲ್ಲಿ ಜೊತೆಯಾಗಿದ್ದರು. ಈ ವೇಳೆ, ಮಧೂರು ದೇವರ ಅನುಗ್ರಹದಿಂದ ನಳಿನ್ ಮತ್ತೆ ರಾಜ್ಯಾಧ್ಯಕ್ಷರಾಗಲಿ, ಮಾಜಿ ಆಗದೇ ಇರಲಿ ಎಂದು ಡಿಕೆ ಶಿವಕುಮಾರ್ ಭಾಷಣದಲ್ಲಿ ಹೇಳಿರುವ ವಿಡಿಯೋ ತುಣುಕು ಎಲ್ಲೆಡೆ ವೈರಲ್ ಆಗಿದೆ. ಕಾಂಗ್ರೆಸ್ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇರಳ ದೇವಸ್ಥಾನದಲ್ಲಿ ಪ್ರಾರ್ಥಿಸಿ ಹಾರೈಸಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

