ಮೃತ ಈರಪ್ಪನ ಮಗ ಮೌನೇಶ ಎನ್ನುವಾತ ಸಣ್ಣ ಪಕೀರಪ್ಪ ಕೊನದವರು ಎನ್ನುವ ಕೊಲೆ ಆರೋಪಿಯ ಮಗಳನ್ನು ಪ್ರೀತಿಸಿ ಮದುವೆಯಾಗಿದ್ದ. ಈ ಹಿನ್ನೆಲೆಯಲ್ಲಿ ಜುಲೈ 11 ನೇ 2020 ರಂದು ಸಂಜೆ 04-45 ಗಂಟೆ ಸುಮಾರಿಗೆ ಸಣ್ಣ ಪಕೀರಪ್ಪ ಸೇರಿ ಎಲ್ಲ ಆರೋಪಿತರು ಸಿಂಧನೂರು ನಗರದ ಸುಕಾಲಪೇಟೆಯ ಹಿರೇಲಿಂಗೇಶ್ವರ ಕಾಲೊನಿಯಲ್ಲಿಈರಪ್ಪನ ಮನೆಗೆ ನುಗ್ಗಿ ಸಿಕ್ಕಿಸಿಕ್ಕವರ ಮೇಲೆ ದಾಳಿ ಮಾಡಿದ್ದು, ಈರಪ್ಪ ಆತನ ಪತ್ನಿ ಸುಮಿತ್ರಮ್ಮ. ಮಕ್ಕಳಾದ ನಾಗರಾಜ, ಹನುಮೇಶ ಹಾಗೂ ಮಗಳಾದ ಶ್ರೀದೇವಿ ಅವರನ್ನು ಕೊಲೆ ಮಾಡಿದ್ದರು. ಅಲ್ಲದೇ ಮೃತ ಈರಪ್ಪನ ಸೊಸೆಯಾದ ರೇವತಿ ಹಾಗೂ ಆತನ ಮಗಳಾದ ತಾಯಮ್ಮ ಮೇಲೂ ಮಾರಾಣಾಂತಿಕೆ ಹಲ್ಲೆ ಮಾಡಿ ಕೊಲೆ ಮಾಡಲು ಪ್ರಯತ್ನಿಸಿದ್ದರು. ಈ ಕುರಿತು ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರ ವಾದ, ಪ್ರತಿವಾದ ಪರಿಶೀಲಿಸಿ ಮೂವರಿಗೆ ಮರಣ ದಂಡನೆ ಹಾಗೂ ತಲಾ 47 ಸಾವಿರ ರೂ.ದಂಡ ಹಾಗೂ 9 ಜನರಿಗೆ ಜೀವಾವಧಿ ಶಿಕ್ಷೆ ಜೊತೆಗೆ ತಲಾ 97,500 ರೂ.ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

