Breaking News
Oplus_131072

ಖಾಸಗಿ ಬಸ್‌ಗೆ ವೇಗವಾಗಿ ಬಂದ ಕ್ಯಾಬ್‌ ಡಿಕ್ಕಿ, ಪರಿಣಾಮ ಏರ್‌ಲೈನ್ಸ್‌ ಸಂಸ್ಥೆಯ ಮಹಿಳಾ ಉದ್ಯೋಗಿ ಸಾವು.!

ಸ್ನೇಹಾ ಕುಮಾರಿ ಇಂಡಿಗೋ ಏರ್‌ಲೈನ್ಸ್‌ ಕಸ್ಟಮರ್‌ ಕೇರ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಮುಂಜಾನೆ ಸುಮಾರು 4.30ರ ಸುಮಾರಿಗೆ ಸಹೋದ್ಯೋಗಿ ಕೌಸರ್‌ ಖಾನಂ ಜತೆ ಬಾಗಲೂರು ಕ್ರಾಸ್‌ ಕಡೆಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಕ್ಯಾಬ್‌ನಲ್ಲಿ ಹೋಗುತ್ತಿದ್ದರು.ಸರ್ವಿಸ್‌ ರಸ್ತೆಯಲ್ಲಿ ತೆರಳುವಾಗ ರಸ್ತೆ ಬದಿ ನಿಲುಗಡೆ ಮಾಡಿದ್ದ ಖಾಸಗಿ ಬಸ್‌ಗೆ ಹಿಂದಿನಿಂದ ಕ್ಯಾಬ್‌ ಚಾಲಕ ಡಿಕ್ಕಿ ಹೊಡೆದಿದ್ದಾನೆ.ಅಪಘಾತಕ್ಕೆ ಕ್ಯಾಬ್‌ ಚಾಲಕನ ಅತೀವೇಗ ಹಾಗೂ ನಿರ್ಲಕ್ಷ್ಯ ಚಾಲನೆಯೇ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಕ್ಯಾಬ್‌ ಚಾಲಕ ಮದ್ಯ ಸೇವಿಸಿರುವ ಬಗ್ಗೆ ಸದ್ಯಕ್ಕೆ ಖಚಿತವಾಗಿಲ್ಲ.ಈ ಸಂಬಂಧ ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣೆಯಲ್ಲಿ ಕ್ಯಾಬ್‌ ಚಾಲಕ ಮತ್ತು ಖಾಸಗಿ ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *