Breaking News

ಸಾಲಕ್ಕೆ ಬೇಸತ್ತು ಕನ್ನಡಪರ ಹೋರಾಟಗಾರ ಲೋಕೇಶ್ ಆತ್ಮಹತ್ಯೆ.!!

ವ್ಯವಹಾರದಲ್ಲಿ ನಷ್ಟ ಉಂಟಾಗಿದ್ದರಿಂದ ಕಳೆದ ಒಂದು ವಾರದಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಅವರಿಗೆ ಆತ್ಮೀಯರು, ಹಿತೈಷಿಗಳು ಧೈರ್ಯ ತುಂಬಿದ್ದರು. ಆದರೆ, ಸೋಮವಾರ ತಡರಾತ್ರಿ ನಗರದ ಗಂಗಾಧರಪುರ ಮನೆ ಹೊರಗೆ ಟರ್ಪೆಂಟೈಲ್‌ ಆಯಿಲ್‌ ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಶೇ40ರಷ್ಟು ಸುಟ್ಟ ಹೋಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ನಗರದ ಮುಕ್ತಿಧಾಮದಲ್ಲಿ ಮಂಗಳವಾರ ಅಂತ್ಯಕ್ರಿಯೆ ನಡೆಯಿತು.ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾಗಿದ್ದ ಲೋಕೇಶ್, ಅನೇಕ ಕನ್ನಡಪರ ಹೋರಾಟ, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *