ಬಸ್ಸು ಬೆಂಗಳೂರಿನಿಂದ ಶೃಂಗೇರಿಗೆ ಬರುತ್ತಿದ್ದು ಈ ವೇಳೆ ಬಸ್ಸಿನಲ್ಲಿ ಸುಮಾರು 50 ಮಂದಿ ಪ್ರಯಾಣಿಕರಿದ್ದರು ಕೊಪ್ಪ ತಾಲೂಕಿನ ಜಲದುರ್ಗ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಯ ಮೇಲೆ ಪಲ್ಟಿಯಾಗಿದೆ. ಘಟನೆಯಲ್ಲಿ ಸುಮಾರು 20 ಮಂದಿಗೆ ಗಾಯಗಳಾಗಿದ್ದು ಅವರನ್ನು ಜಯಪುರ, ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

