Breaking News
Oplus_131072

ಲಕ್ಕೂರು ಸೇತುವೆ ಬಳಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ವಿಭಜಕಕ್ಕೆ ಡಿಕ್ಕಿ!!

ತುಮಕೂರು ಸಮೀಪದ ಗ್ರಾಮವೊಂದರ ಸಂಬಂಧಿಕರ ಮನೆಯಲ್ಲಿಆಯೋಜಿಸಿದ್ದ ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾರುತಿ ಸೆಲೆರಿಯೊ ಕಾರಿನಲ್ಲಿ ತೆರಳುತ್ತಿದ್ದರು. ಲಕ್ಕೂರು ಸೇತುವೆ ಬಳಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.ಕಾರಿನಲ್ಲಿದ್ದವರು ಸೀಟ್ ಬೆಲ್ಟ್‌ ಹಾಕಿದ್ದರೆ? ಎಂಬುದನ್ನು ಪರಿಶೀಲಿಸಲಾಗುತ್ತಿದೆ. ನೆಲಮಂಗಲ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಮೂಲಗಳು ತಿಳಿಸಿವೆ.’ಬೆಂಗಳೂರು ಕಡೆಯಿಂದ ತುಮಕೂರು ಕಡೆ ಕಾರು ಚಲಿಸುತ್ತಿತ್ತು. ಅದೇ ಮಾರ್ಗವಾಗಿ ಹೋಗುತ್ತಿದ್ದ ಲಾರಿ ಚಾಲಕ ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತಿದ್ದ. ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ರಸ್ತೆಯ ವಿಭಜಕ್ಕೆ ಡಿಕ್ಕಿಯಾಗಿದೆ ಎಂಬುದು ಗೊತ್ತಾಗಿದೆ. ಘಟನೆ ನಡೆದ ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‌ಪಿ ಸಿ.ಕೆ.ಬಾಬಾ ಹಾಗೂ ನೆಲಮಂಗಲ ಸಂಚಾರ ಠಾಣೆಯ ಪೊಲೀಸರು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *