ರಸ್ತೆಯ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ನೆಲಮಂಗಲದ ದಾಬಸ್ಪೇಟೆಯ ಅಂಚೆಮನೆ ಕ್ರಾಸ್ ಬಳಿ ಇಂದು ಸಂಭವಿಸಿದೆ.ಎಲ್ಲರೂ ಮಲ್ಲೇಶ್ವರ ಮೂಲದವರೆಂದು ತಿಳಿದುಬಂದಿದ್ದು, ಬೆಂಗಳೂರಿನಿಂದ ತುಮಕೂರು ಕಡೆಗೆ ನಾಮಕರಣ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಅಂಚೆಮನೆ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿ ಅಪಘಾತವಾಗಿದ್ದು, ಕಾರು ಜಖಂಗೊಂಡಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ವಿಭಾಗದ ಎಸ್ಪಿ ಸಿ.ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

