Breaking News

ತಹವ್ವುರ್ ರಾಣಾ ಭಾರತಕ್ಕೆ ಹಸ್ತಾಂತರ; ತಿಹಾರ್‌ ಜೈಲಿಗೆ ಶಿಫ್ಟ್‌ ಸಾಧ್ಯತೆ!!

ರಾಣಾ ಭಾರತಕ್ಕೆ ತಲುಪಿದಾಗ ದೆಹಲಿಯ ತಿಹಾರ್ ಜೈಲಿನಲ್ಲಿರುವ ಹೆಚ್ಚಿನ ಭದ್ರತೆಯ ವಾರ್ಡ್‌ನಲ್ಲಿ ಇರಿಸಲಾಗುವುದು ಎಂದು ತಿಳಿದು ಬಂದಿದೆ. ನಂತರ ದೆಹಲಿಯ ಪಟಿಯಾಲ ಹೌಸ್‌ನಲ್ಲಿರುವ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ. ದೆಹಲಿ ಕಾರಾಗೃಹ ಇಲಾಖೆಯು ತಿಹಾರ್ ಜೈಲಿನಲ್ಲಿ ಆತನನ್ನು ಇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆತ ಇರುವ ಸೆಲ್‌ಗೆ ಹೆಚ್ಚಿನ ಭದ್ರತೆ ಒದಗಿ, ಸಿಸಿಟಿವಿಯನ್ನು ಅಳವಡಿಸಲಾಗುತ್ತದೆ. ಸದಾ ಆತನ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಸೆಲ್‌ನಲ್ಲಿಯೇ ಆತನಿಗೆ ಸಂಪೂರ್ಣ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.ರಾಣಾನನ್ನು ಗಡಿಪಾರು ಮಾಡುವುದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ರಾಜತಾಂತ್ರಿಕತೆಯ “ದೊಡ್ಡ ಯಶಸ್ಸು” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. “ಯಾರ ಆಳ್ವಿಕೆಯಲ್ಲಿ ಬಾಂಬ್ ಸ್ಫೋಟಗಳು ನಡೆದವೋ ಆ ಸರ್ಕಾರಕ್ಕೆ ಆರೋಪಿಯನ್ನು ಕರೆತರಲು ಸಾಧ್ಯವಾಗಿಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್‌ಗೆ ಟಾಂಗ್‌ ನೀಡಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *