Breaking News

ಮಗಳ ಪ್ರೇಮ ವಿವಾಹ ಅಪ್ಪನ ಹೆಣದ ಮೇಲೆ!!

ಮಗಳ ಪ್ರೇಮ ವಿವಾಹದಿಂದ ನೊಂದ ತಂದೆಯೊಬ್ಬರು ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ. ಮೃತನನ್ನು ರಿಷಿರಾಜ್ ಅಲಿಯಾಸ್ ಸಂಜು ಜೈಸ್ವಾಲ್ ಎಂದು ಗುರುತಿಸಲಾಗಿದೆ. ಪೊಲೀಸರು ಪ್ರಕರಣದ ತನಿಖೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಿಷಿರಾಜ್ ಜೈಸ್ವಾಲ್ ಅವರ ಮಗಳು ಹರ್ಷಿತಾ ಆನಂದ್ ಎಂಬ ಹುಡುಗನನ್ನು ಪ್ರೀತಿ ಮಾಡುತ್ತಿದ್ದಳು. ಸ್ವಲ್ಪ ದಿನಗಳ ಹಿಂದೆ ಅವಳು ತನ್ನ ಪ್ರಿಯಕರ ಆನಂದ್ ಜೊತೆ ಓಡಿಹೋದಳು.ಮಾನಸಿಕವಾಗಿ ನೊಂದಿದ್ದ ರಿಷಿರಾಜ್ ನಿನ್ನೆ ರಾತ್ರಿ, ಮನೆಯಲ್ಲಿ ಒಬ್ಬರೇ ಇದ್ದಾಗ, ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವುದು ಕಂಡುಬಂದಿದೆ.ಪೊಲೀಸರು ಈ ಪ್ರಕರಣದ ತನಿಖೆ ಆರಂಭಿಸಿದ್ದು, ರಿಷಿರಾಜ್ ಸಾವಿಗೆ ಕಾರಣಗಳ ಬಗ್ಗೆ ಆಳವಾಗಿ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *